ಭಾರತ ಮತ್ತು ವೆಸ್ಟ್‌ಇಂಡೀಸ್ ನಡುವಿನ 5ನೇ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಸರಣಿ 2-2ರಲ್ಲಿ ಸಮಬಲಗೊಂಡಿದ್ದು, ಮಳೆಯ ಭೀತಿಯ ನಡುವೆಯೂ ಈ ಪಂದ್ಯದಲ್ಲಿ ಗೆದ್ದವರು ಟ್ರೋಫಿ ಮುಡಿಗೇರಿಸಿಕೊಳ್ಳಲಿದ್ದಾರೆ.