ಮೈಸೂರು: ಮೈಸೂರು ದಸರಾ ಆನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ನಟಿ, ಮಾಜಿ ಸಂಸದೆ ರಮ್ಯಾ / ದಿವ್ಯಸ್ಪಂದನಾ ಅವರು ಮಾಡಿರುವ ಟ್ವೀಟ್ ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ. ಈಚೆಗೆ ಮಧ್ಯರಾತ್ರಿ ಕೆಲವರು ಪಟಾಕಿ ಸಿಡಿಸುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಅವರು ಪೋಸ್ಟ್‌ ಹಂಚಿಕೊಂಡಿದ್ದರು.