ಚಿತ್ರದುರ್ಗ: ಮತದಾರರ ಪಟ್ಟಿಯಿಂದ (Voter List) ಹೆಸರುಗಳನ್ನು ತೆಗೆದುಹಾಕಿರುವ ಕುರಿತು ಬಂದಿರುವ ದೂರುಗಳನ್ನು ಚುನಾವಣಾ ಆಯೋಗ (ECI) ಗಂಭೀರವಾಗಿ ಪರಿಗಣಿಸಿ, ಪ್ರತಿಯೊಂದು ಆಕ್ಷೇಪಣೆಯನ್ನೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಆಗ್ರಹಿಸಿದರು.