ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ T20 ಪಂದ್ಯ ರಾಯ್ಪುರದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯ ಗೆದ್ದಿರುವ ಭಾರತ, ಸರಣಿ ವಶಪಡಿಸಿಕೊಳ್ಳಲು ಸಜ್ಜಾಗಿದೆ. ಜಿಂಬಾಬ್ವೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಉಭಯ ತಂಡಗಳ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.