ಶಿವಮೊಗ್ಗ: ನಗರದ (Shivamogga) ಕೆಎಸ್‌ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷಾ ಅಕ್ರಮ ಆರೋಪದ ವರದಿ ʻಪಬ್ಲಿಕ್‌ ಟಿವಿʼಯಲ್ಲಿ ಪ್ರಸಾರವಾಗುತ್ತಿದ್ದಂತೆ ಕಚೇರಿಯ ನಿರ್ದೇಶಕ ಬಿ.ಎಂ.ಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ವಿಶ್ವವಿದ್ಯಾಲಯದ ಘನತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ.