ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ಗಾಯಗೊಂಡಿರುವ ವೇಗಿ ಪ್ರಸಿದ್ಧ್ ಕೃಷ್ಣ ಬದಲಿಗೆ ಯುವ ವೇಗಿ ಅನ್ಶುಲ್ ಕಾಂಬೋಜ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪುದುಚೇರಿಯಲ್ಲಿ ಆಸ್ಟ್ರೇಲಿಯಾ 'ಎ' ವಿರುದ್ಧದ ಪಂದ್ಯದಿಂದ ಅನ್ಶುಲ್ ಕಾಂಬೋಜ್ ಮಧ್ಯದಲ್ಲೇ ಹೊರನಡೆದು ಟೀಂ ಇಂಡಿಯಾ ಸೇರಿದ್ದಾರೆ.