ರೈತ ಯುವಕರ ಮದುವೆ ವಿಚಾರ ಇದೀಗ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಕಾಡುತ್ತಿದೆ ಎಂದು ಹೇಳಿರುವ ರೈತನೊಬ್ಬ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಭಾವುಕ ಮನವಿ ಸಲ್ಲಿಸಿದ್ದಾರೆ. "ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು ಹಾಕಲಾಗುತ್ತಿದೆ" ಎಂದು ತಮ್ಮ ಅಳಲು ತೋಡಿಕೊಂಡಿರುವ ರೈತ, ಈ ಸಮಸ್ಯೆಗೆ ಸರ್ಕಾರದಿಂದ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.