ನವದೆಹಲಿ: ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳಿಗೆ ಸೇರಿದ ಸಂಸದರಿಗೆ ಹೆಚ್ಚಿನ ಸಮಯ ಮಾತನಾಡಲು ಅವಕಾಶ ನೀಡುವಂತೆ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ (Jitan Ram Manjhi) ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಮನವಿ ಮಾಡಿದ್ದಾರೆ.