ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮ್ಯಾಗಿ ನೂಡಲ್ಸ್ ಬಗ್ಗೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕ್ಯಾನ್ಸರ್ ಎಚ್ಚರಿಕೆ ನೀಡಿ ಮಾರಾಟ ಮಾಡಲಾಗುತ್ತಿದೆ. ಈ ಕುರಿತ ಫೋಟೋವೊಂದು ರೆಡಿಟ್‌ನಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಯಾವುದೇ ಎಚ್ಚರಿಕೆ ಇಲ್ಲದೆ ಮಾರಾಟವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ.