ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಸದ್ಯಕ್ಕೆ ಆಸ್ಪತ್ರೆಗೆ ಶಿಫ್ಟ್ ಮಾಡುವ ನಿರ್ಧಾರ ಇಲ್ಲ. ತೀವ್ರ ಬೆನ್ನು ನೋವಿನ ಸಮಸ್ಯೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ವಿಕ್ಟೋರಿಯಾ ಫಿಸಿಯೋಥೆರಪಿ ವೈದ್ಯರಿಂದ ಚಿಕಿತ್ಸೆ ನೀಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.