ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.