ರಾಜ್ಯದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಭಾಗಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಅಭಿಯೋಜನೆಗೆ ಸಿಎಂ ಡಿ.ಕೆ. ಶಿವಕುಮಾರ್ ಅನುಮತಿ ನೀಡಿದ್ದಾರೆ. ಭ್ರಷ್ಟಾಚಾರ, ಮೌಲ್ಯಮಾಪನ ಅಕ್ರಮ ಆರೋಪಗಳ ಬಗ್ಗೆ ತನಿಖಾ ಸಂಸ್ಥೆಗಳು ಸಾಕ್ಷ್ಯಾಧಾರ ಕಲೆಹಾಕಿದ್ದು, ಅಕ್ರಮ ಹಣಕಾಸು ವ್ಯವಹಾರ ನಡೆದಿದ್ದು ಬೆಳಕಿಗೆ ಬಂದಿದೆ.