ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿ ಧನುಷ್ ವರ್ತನೆ ಬಗ್ಗೆ ಸೌಂದರ್ಯಾ ಶೆಟ್ಟಿ 'ಮೀಟರ್ ಇಲ್ಲ' ಎಂದು ಕಿಡಿಕಾರಿದ್ದಾರೆ. ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಶುರುವಾದ ಈ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಸ್ಪರ್ಧಿಗಳು ಪರಸ್ಪರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಣ್ಣೀರಿಟ್ಟಿರುವ ಘಟನೆ ಮನೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ.