ಬೆಂಗಳೂರು: ರಾಜ್ಯ ಸರ್ಕಾರಿ ಹಾಗೂ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ದುಶ್ಕೃತ್ಯ ತಡೆಗಟ್ಟಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA) ಮಾಡಿದ್ದ ಮಾಸ್ಟರ್ ಪ್ಲ್ಯಾನ್ ಅನ್ನು ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. ಇತ್ತೀಚೆಗೆ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯೊಂದರಲ್ಲಿ 3 ಲೇಯರ್ ಓಎಂ ಆರ್ ಶೀಟ್ ವ್ಯವಸ್ಥೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ.