ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಈಜುಗಾರ ಮೊಹಮ್ಮದ್ ಶಮ್ಸ್ ಆಲಂ ಶೇಖ್ ವಿರುದ್ಧ ದೈಹಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿಬಂದಿದೆ. ಜಪಾನ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರನ್ನು ಬಂಧಿಸಿ, ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಭಾರತೀಯ ಪ್ಯಾರಾಲಿಂಪಿಕ್ ಸಮಿತಿ (PCI) ಶೇಖ್ ವಿರುದ್ಧ ಜೀವಮಾನ ನಿಷೇಧ ಹೇರಲು ಚಿಂತಿಸುತ್ತಿದೆ.