ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಇಂದು ಮುಂಜಾನೆ ಸೌದಿ ಅರೇಬಿಯಾದ ಅತ್ಯಂತ ಪ್ರಮುಖ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ಕ್ಷಿಪಣಿಯು ನಿಖರವಾಗಿ ಗುರಿಯನ್ನು ತಲುಪಿದೆ ಎಂದು ಹೌತಿ ಪಡೆಗಳು ಪ್ರತಿಪಾದಿಸಿವೆ.