ನಾಡಿನಾದ್ಯಂತ ದಸರಾ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ. ಆದರೆ ಮಂಜಿನ ನಗರಿ ಮಡಿಕೇರಿಯ ದಸರಾ ಮಾತ್ರ ತನ್ನದೇ ಆದ ವಿಶಿಷ್ಟ ಪರಂಪರೆ, ಸಂಪ್ರದಾಯ ಮತ್ತು ಧಾರ್ಮಿಕ ವೈಭವದಿಂದ ಗಮನ ಸೆಳೆಯುತ್ತದೆ. ಇಲ್ಲಿನ ದಸರಾ ಸಂಭ್ರಮಕ್ಕೆ ಕಿರೀಟಪ್ರಾಯವಾಗಿರುವುದೇ ದಶಮಂಟಪಗಳ ಶೋಭಾಯಾತ್ರೆ.