ಅಮರಾವತಿ: ಖಾಸಗಿ ಔಷಧ ತಯಾರಿಕಾ ಘಟಕದಲ್ಲಿ (Pharma Facility) ನೀರಿನ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ (Andhra Pradesh) ತಿರುಪತಿ (Tirupati) ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಸ್ಫೋಟ (Boiler Blast) ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.