ದೆಹಲಿಯ ಜಂತರ್ ಮಂತರ್ ಬಳಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರದಂದು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA)ನ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.