ಪಾಕಿಸ್ತಾನದ ಪೇಶಾವರದಲ್ಲಿ ಖಾಸಗಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಭೀಕರ ದುರಂತ ಸಂಭವಿಸಿದೆ. 17 ಪುಟ್ಟ ಮಕ್ಕಳು ಮತ್ತು ಒಬ್ಬ ಶಿಕ್ಷಕಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಹಳೆಯ ಕಟ್ಟಡಗಳ ಕಳಪೆ ನಿರ್ವಹಣೆ, ಸುರಕ್ಷತಾ ಮಾನದಂಡಗಳ ಕೊರತೆಯೇ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.