ಮಹಿಳಾ ಬ್ಯಾರಕ್‌ನಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿ ಪವಿತ್ರಾ ಗೌಡ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿರುವ 59ನೇ ಸಿಸಿಹೆಚ್ ನ್ಯಾಯಾಲಯವು ಅಕ್ಟೋಬರ್ 17ಕ್ಕೆ ಆದೇಶ ಕಾಯ್ದಿರಿಸಿದೆ.