ಹೈದರಾಬಾದ್: ಟಾಲಿವುಡ್‌ನ ಗ್ಲೋಬಲ್ ಸ್ಟಾರ್, ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲಾ ಅವರು ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಶ್ರೀರಾಮನ ಸುಂದರ ಮೂರ್ತಿಯೊಂದರ ಮೂಲಕ ಉಪಾಸನಾ ಅವರು ತಮ್ಮ ವೈಯಕ್ತಿಕ ಹಾಗೂ ಆಧ್ಯಾತ್ಮಿಕ ಜೀವನದ ಅತ್ಯಂತ ಮಹತ್ವದ ಮೈಲಿಗಲ್ಲೊಂದನ್ನ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.