ನಾಡಿನೆಲ್ಲೆಡೆ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸೆಲೆಬ್ರಿಟಿಗಳ ಮನೆಯಲ್ಲಿ ಕೂಡ ವಿಜಯದಶಮಿ ಸಂಭ್ರಮ ಕಳೆಗಟ್ಟಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಮನೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗಿದೆ. ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ ಮತ್ತು ರಾಧ್ಯಾ ಶೆಟ್ಟಿ ಅವರು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.