ಮುಂಬರುವ ನ್ಯೂಜಿಲೆಂಡ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್, ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಮುಲ್ಲಾನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಛತ್ತೀಸ್‌ಗಢ ವಿರುದ್ಧದ ರಣಜಿ ಟ್ರೋಫಿ ಎಲೈಟ್ ಪಂದ್ಯದಲ್ಲಿ ಪಂಜಾಬ್ ಪರ ಗಿಲ್ ಕಣಕ್ಕಿಳಿದಿದ್ದಾರೆ.