ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನವೇ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಕಿ ಕ್ಷೇತ್ರದ ದಂತಕಥೆ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪರ್ಗತ್ ಸಿಂಗ್ ಅವರನ್ನು ನೇಮಕ ಮಾಡಿದೆ.