ಕರ್ನಾಟಕದಲ್ಲಿ ಎಸ್‌ಐಆರ್ ಫಾರ್ಮ್-7 ದುರ್ಬಳಕೆ ವಿವಾದ ರಾಜಕೀಯ ತಿರುವು ಪಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ತಮ್ಮ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ದೂರು ನೀಡಿದ್ದಾರೆ.