ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರದ ನಿರ್ಧಾರವು ಜನಸಾಮಾನ್ಯರ ಮೇಲಿನ ಗದಾಪ್ರಹಾರವೆಂದು ಕಿಡಿಕಾರಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲದೆ, ಆಡಳಿತಾತ್ಮಕ ವೈಫಲ್ಯದಿಂದ ಬೊಕ್ಕಸ ಬರಿದಾಗಿಸಿಕೊಂಡಿರುವ ಸರ್ಕಾರ, ತನ್ನ ರಾಜಕೀಯ ತಪ್ಪುಗಳಿಗೆ ಬಡವರಿಂದ ದಂಡ ವಸೂಲಿ…