ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 33ನೇ ಕಂತಿನ ₹2,482 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.