ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿ (TT Vehicle Overturned) 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ನಡೆದಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.