ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ದಾಖಲಿಸಿಕೊಂಡು ವಿಚಾರಣೆ ಮುಂದೂಡಿದೆ. ಪ್ರದೋಷ್‌ಗೆ ಸಿಎಆರ್ ಎಸ್ಕಾರ್ಟ್ ನೀಡಲಾಗಿದೆ. ಮಾಫಿ ಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ವಿಜಯಲಕ್ಷ್ಮೀ ದರ್ಶನ್ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.