ಕ್ರಿಕೆಟ್ ಮೈದಾನದಲ್ಲಿ ದಾಖಲೆಗಳು ಸೃಷ್ಟಿಯಾಗುವುದೇ ಮುರಿಯುವುದಕ್ಕೆ ಎಂಬ ಮಾತಿದೆ. ಲಾಹೋರ್‌ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ದಾಖಲೆ ಬರೆದಿದೆ. ಅದು ಸಹ 24 ವರ್ಷಗಳ ಹಿಂದೆ ಟೀಮ್ ಇಂಡಿಯಾ ಬರೆದಿದ್ದ ಐತಿಹಾಸಿಕ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.