ಶಿವಮೊಗ್ಗ: ಬೆಂಗಳೂರಿಂದ (Bengaluru) ಸಾಗರಕ್ಕೆ (Sagar) ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ (Fire Accident) ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು – ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿತ್ತು. ಈ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ.