ಉಡುಪಿ: ನವರಾತ್ರಿ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಬೃಹತ್ ಗಾತ್ರದ ಲೈಟ್ ಸೆಟ್ ಉರುಳಿ ಬಿದ್ದ ಘಟನೆ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ವಯೋವೃದ್ಧ ಭಕ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.