ಶಿರಸಿ: ತಾಲ್ಲೂಕಿನ ಬೊಮ್ಮನಳ್ಳಿ ಗ್ರಾಮದ ಅರಣ್ಯ ಸರ್ವೆ ನಂ. 325ರಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದ ಸ್ಥಳದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಓರ್ವನನ್ನು ಬಂಧಿಸಿ 20.5 ಕೆ.ಜಿ ಶ್ರೀಗಂಧ ವಶಪಡಿಸಿಕೊಂಡಿದ್ದಾರೆ.