ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಬೃಹತ್ ರ‍್ಯಾಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಮತ್ತು ಮತದಾರರ ಪಟ್ಟಿ ಅಕ್ರಮ ಎಸಗಲಾಗಿದೆ ಎಂದು ಅವರು ಆರೋಪಿಸಿದ್ದಾರೆ.