ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಐಪಿಎಸ್ ಅಧಿಕಾರಿ, ಹಾಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (KSRP) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಎಸ್. ರವಿ ಅವರು ಮಂಗಳವಾರ ದಿಢೀರನೆ ಸ್ವಯಂ ನಿವೃತ್ತಿ (VRS) ಘೋಷಿಸಿ ರಾಜೀನಾಮೆ ಸಲ್ಲಿಸಿದ್ದಾರೆ.