ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತೀರ್ಥ ಗ್ರಾಮದ ಬೀಬಿ ಫಾತಿಮಾ ಮಹಿಳಾ ಸ್ವಸಹಾಯ ಸಂಘಕ್ಕೆ 'ಸಸ್ಯ ತಳಿ ಸಂರಕ್ಷಕ ಸಮುದಾಯ ಪ್ರಶಸ್ತಿ' ಲಭಿಸಿದೆ. ದೇಸಿ ಬೀಜಗಳ ಸಂರಕ್ಷಣೆ ಮತ್ತು 150ಕ್ಕೂ ಹೆಚ್ಚು ಸಿರಿಧಾನ್ಯ ತಳಿಗಳನ್ನು ಉಳಿಸುವಲ್ಲಿ ಇವರ ಸಾಧನೆ ಅಪಾರ.