ದಸರಾ ಹಬ್ಬಕ್ಕೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ದೆಹಲಿ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ದರ ಹೆಚ್ಚಳವಾಗಿದೆ. ಆದರೆ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.