ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ್ ತಂಡ 30 ರನ್‌ಗಳ ಮಹತ್ವದ ಮುನ್ನಡೆ ಸಾಧಿಸಿದೆ. ಈ ಮುನ್ನಡೆ ತಂದುಕೊಟ್ಟಿದ್ದು ಯುವ ದಾಂಡಿಗ ತೌಹಿದ್ ಹೃದೋಯ್. ಅದು ಕೂಡ 184 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಆಲೌಟ್ ಆಗುವ ಸ್ಥಿತಿಯಲ್ಲಿದ್ದ ಬಾಂಗ್ಲಾದೇಶ್ ಪರ ದ್ವಿಶತಕ ಸಿಡಿಸುವ ಮೂಲಕ ಎಂಬುದು ವಿಶೇಷ.