ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಸೀಟು ಪಡೆದ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ಶುಲ್ಕ ಪಾವತಿಸಬೇಕು.