ವಿಜಯಪುರ: ಬೈಕ್‌ ಹಾಗೂ ಕಾರ್‌ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ‌. ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಘಟನೆ ನಡೆದಿದೆ.