ಅಂಕೋಲಾ: ಅಗಸೂರು ಸಮೀಪ ಸರಳೆಬೈಲ್‌ನಲ್ಲಿರುವ ಸಂಗೀತಾ ಡಾಭಾದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಧ್ಯಪ್ರದೇಶ ಮೂಲದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.