ಏಷ್ಯನ್ ಗೇಮ್ಸ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ, 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 192 ರನ್‌ಗಳಿಸಲಷ್ಟೇ ಶಕ್ತವಾಯಿತು.