ಕೊಹಿಮಾ: ಕಳ್ಳಭಟ್ಟಿ (Spurious Liquor) ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್‌ನಲ್ಲಿ (Nagaland) ನಡೆದಿದೆ. ಘಟನೆ ಬೆನ್ನಲ್ಲೇ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ.