‘ಜೈಲರ್ 2’ ಸಿನಿಮಾ ಮೊದಲ ದಿನ 120 ಕೋಟಿಗೂ ಹೆಚ್ಚು ಮೊತ್ತವನ್ನು ವಿಶ್ವದಾದ್ಯಂತ ಗಳಿಕೆ ಮಾಡಿದೆ. ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾದ ಮುಂಗಡ ಬುಕಿಂಗ್ ಬಲು ಜೋರಾಗಿತ್ತು. ಆಗಲೇ ಸಿನಿಮಾದ ಒಳ್ಳೆಯ ಗಳಿಕೆಯನ್ನು ಅಂದಾಜು ಮಾಡಲಾಗಿತ್ತು. ಅದರಂತೆ ಈ ಸಿನಿಮಾ ಮೊದಲ ದಿನ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 120 ಕೋಟಿಗೂ ಹೆಚ್ಚು ಹಣವನ್ನು ಬಾಚಿಕೊಂಡಿದೆ.