ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಕುಮಾಮೊಟೊ ಮಾಸ್ಟರ್ಸ್ ಜಪಾನ್ ಓಪನ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದಾರೆ. ಫೈನಲ್‌ನಲ್ಲಿ ಜಪಾನ್‌ನ ಕೋಕಿ ವಟನಾಬೆ ವಿರುದ್ಧ ರೋಚಕ ಕಮ್‌ಬ್ಯಾಕ್ ಗೆಲುವು ಸಾಧಿಸಿದ ಲಕ್ಷ್ಯ, ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾದರು.