ಸೊರಬ: ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಕ್ಷೇತ್ರದ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.