ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುವ ವಿಶ್ವಾಸ ಮೂಡಿಸಿದೆ. ಆದರೆ ಈಗಾಗಲೇ ಅನುಭವಿಸಿದ ಬರಗಾಲ, ಹಾನಿ, ರೈತರ ಸಂಕಷ್ಟ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಬರ ಪರಿಹಾರಕ್ಕೆ ಕೇಂದ್ರದ ಅನುದಾನಕ್ಕಾಗಿ ಕಾಯದೇ ರಾಜ್ಯ ಸರ್ಕಾರದಿಂದಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.