ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ (Shivamogga Dasara) ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಘಟನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ಸಿಸಿಎಫ್ ಹನುಮಂತಪ್ಪ ಅವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.