ಕೊಪ್ಪಳ: ರಾಜ್ಯದ ಕಲ್ಯಾಣ ಕರ್ನಾಟಕಕ್ಕೆ ವ್ಯಾಪ್ತಿಗೆ ಬರುವ ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಜಿಲ್ಲೆಯಲ್ಲಿ ಪ್ರತ್ಯೇಕ ಎಸ್‌ಟಿ ಜಿಲ್ಲಾ ಕಚೇರಿ ಸ್ಥಾಪನೆಯ ಭರವಸೆ ನೀಡಿದ್ದಾರೆ.